ಬೆಂಗಳೂರು : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಲೋಕಾಯುಕ್ತ ದಾಳಿ ವೇಳೆ ಪುತ್ರ ಪ್ರಶಾಂತ್ ಮಾಡಾಳು ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಹೈಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು.
ನಂತರ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳು ವಿರೂಪಾಕ್ಷಪ್ಪರನ್ನ ಅವರನ್ನು ಇಂದು, ಮಂಗಳವಾರ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳು ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಅವರಿಗೆ ಅನಾರೋಗ್ಯವಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ವಾದಿಸಿದರು. ಅಂತಿಮವಾಗಿ ನ್ಯಾಯಾಧೀಶ ಬಿ.ಜಯಂತ್ ಕುಮಾರ ಐದು ದಿನಗಳ ಕಾಲ ಏಪ್ರಿಲ್ 1ರ ವರೆಗೆ ಲೋಕಾಯುಕ್ತ ಕಸ್ಟಡಿ ನೀಡಿ ಆದೇಶ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ