ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

ಹಾವೇರಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಾವೇರಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಹಾವೇರಿ ಜಿಲ್ಲಾ ಕಾಂಗ್ರೆಸ್​​ ಅಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ಅವರು ರಾಜಿನಾಮೆ ನೀಡಿದ್ದಾರೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ.
ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ರವಾನಿಸಿದ್ದಾರೆ.
ಈವರೆಗೂ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಕಳೆದ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಇದನ್ನು ಅಂಗೀಕರಿಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಹಾವೇರಿ ಮೀಸಲು ಕ್ಷೇತ್ರದಲ್ಲಿ ರುದ್ರಪ್ಪ ಲಮಾಣಿ ಹೊರತುಪಡಿಸಿ ಬೇರೆಯಾರಿಗಾದರೂ ಟಿಕೆಟ್ ಕೊಡಿ ಎಂದು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಮನವಿ ಮಾಡಿದ್ದರು ಹಾಗೂ ಈ ಬಾರಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಘೋಷಣೆ ಮಾಡಿದ್ದರಿಂದ ಅಸಮಾಧಾನಗೊಂಡಿರುವ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement