ರಾಜ್ಯದಲ್ಲಿ 9 ನೂತನ ವಿಶ್ವ ವಿದ್ಯಾಲಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ನೂತನವಾಗಿ ಸ್ಥಾಪಿಸಲಾಗಿರುವ ೯ ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವರ್ಚುವಲ್‌ ಮೂಲಕ ಲೋಕಾಪರ್ಣೆಗೊಳಿಸಿದ್ದಾರೆ.
ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಒಂಬತ್ತು ವಿಶ್ವವಿದ್ಯಾಲಯಗಳನ್ನು ಬೊಮ್ಮಾಯಿ ಉದ್ಘಾಟಿಸಿದ್ದು, ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಮುರುಗೇಶ್ ನಿರಾಣಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.
ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದು, ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆದಾಗಲೇ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 ವಿಶ್ವದ ಉನ್ನತ  ವಿವಿಗಳ ಜೊತೆಗೆ ಒಪ್ಪಂದ

ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಕರ್ನಾಟಕದಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ಪ್ರಧಾನಿ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಎಂದು ಹೇಳುತ್ತಿದ್ದಾರೆ. ಭಾರತ ಕೊರೊನಾ ನಿಯಂತ್ರಣ ಕ್ರಮಕ್ಕೆ ಚೀನಾ ಸಹ ಮೆಚ್ಚಿಕೊಂಡಿದೆ ಎಂದರು.
ನೂತನವಾಗಿ ಸ್ಥಾಪಿಸಿರುವ ಹಾವೇರಿ, ಬೀದರ, ಹಾಸನ, ಕೊಡಗು, ಚಾಮರಾಜನಗರ, ಕೊಪ್ಪಳ, ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಮಾರ್ಚ್ 20 ರಂದು ಹೊರಡಿಸಿತ್ತು. .

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement