ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು-ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ..ಇದರ ಪ್ರಕ್ರಿಯೆ ಹೇಗೆ..?

 ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆರಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ನಡೆದಾಡಲು ಆಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ನೀಡಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವಕುಮಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟ 12,15,763ಮತದಾರರು ಹಾಗೂ 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ.ಅಲ್ಲದೆ, 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮನೆಯಿಂದ ಮತದಾನ ಮಾಡುವುದು ಹೇಗೆ..?
ಇದಕ್ಕೆ ಚುನಾವಣೆ ಆಯೋಗದ ವೆಬ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಅಲ್ಲದೆ, ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶವಿದೆ.
ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಪತ್ರ ರವಾನೆ ಮಾಡಲಾಗುತ್ತದೆ
ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ.
ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವೀಡಿಯೊ ಚಿತ್ರೀಕರಣ ಸಹ ಮಾಡಲಾಗುತ್ತದೆ.
ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement