ಯಾವುದೇ ಆತುರವಿಲ್ಲ…: ರಾಹುಲ್ ಗಾಂಧಿ ವಯನಾಡ ಕ್ಷೇತ್ರದ ಉಪಚುನಾವಣೆ ಕುರಿತು ಚುನಾವಣಾ ಆಯೋಗ

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದ ನಂತರ ವಯನಾಡು ಲೋಕಸಭಾ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ದಿನಾಂಕಗಳನ್ನು ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿದೆ. ಸೂರತ್‌ ನ್ಯಾಯಾಲಯವು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ ಎಂದು ಚುನಾವಣಾ ಸಂಸ್ಥೆ ತರ್ಕಿಸಿದೆ.
ಮುಂದಿನ ಆರು ತಿಂಗಳಲ್ಲಿ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರಾಹುಲ್ ಗಾಂಧಿಗೆ ಕಾನೂನು ಪರಿಹಾರವನ್ನು ಕಂಡುಕೊಳ್ಳಲು ನ್ಯಾಯಾಲಯವು 30 ದಿನಗಳ ಕಾಲಾವಕಾಶವನ್ನು ನೀಡಿದೆ ಮತ್ತು ಅಲ್ಲಿಯವರೆಗೆ ಆಯೋಗವು ಕಾಯಲಿದೆ ಎಂದು ಸ್ಪಷ್ಟಪಡಿಸಿದರು.
ವಿಚಾರಣಾ ನ್ಯಾಯಾಲಯವು ನ್ಯಾಯಾಂಗ ಪರಿಹಾರಕ್ಕಾಗಿ 30 ದಿನಗಳ ಕಾಲಾವಕಾಶವನ್ನು ನೀಡಿದೆ. ಸಮಯ ಕಳೆದ ನಂತರ ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ರಾಜೀವ್ ಕುಮಾರ್ ಹೇಳಿದರು.
ಅವರು ಕರ್ನಾಟಕ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು. ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಚುನಾವಣೆ ನಡೆಯಲಿದೆ ಹಾಗೂ ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಪಂಜಾಬ್, ಒರಿಸ್ಸಾ, ಉತ್ತರ ಪ್ರದೇಶ ಮತ್ತು ಮೇಘಾಲಯ ಕ್ಷೇತ್ರಗಳಿಗೂ ಮೇ 10ರಂದು ಉಪಚುನಾವಣೆ ನಡೆಯಲಿದೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement