ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಎಸ್.ಆರ್ ಶ್ರೀನಿವಾಸ

ಬೆಂಗಳೂರು : ತುಮಕೂರು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು, ಗುರುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ‍್ಧರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂದ ಕಾರಣ ಜೆಡಿಎಸ್ ತೊರೆದೆ ಎಂದು ತಿಳಿಸಿದರು.
ನಾನು ಮೂಲತಃ ಕಾಂಗ್ರೆಸ್ ಸದಸ್ಯನೇ. ಕಾಂಗ್ರೆಸ್ ಪಕ್ಷದಿಂದ ನಾನು ಜಿಪಂ ಸದಸ್ಯನಾಗಿದ್ದೆ. 2002ರಲ್ಲಿ ನಾನು ಜೆಡಿಎಸ್ ಸೇರಿದ್ದೆ. ನನಗೆ ನಾಟಕ ಹಾಗೂ ಗಿಮಿಕ್ ಮಾಡಲು ಬರಲ್ಲ ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ನೀಡಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

ನಿಮ್ಮ ಕಾಮೆಂಟ್ ಬರೆಯಿರಿ

advertisement