ಬಹುಭಾಷಾ ನಟ ಶರತ್ ಬಾಬು (71) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಕುರಿತು ತೆಲುಗು ನಟಿ ಕರಾಟೆ ಕಲ್ಯಾಣಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಶರತ್ ಬಾಬು ಅನಾರೋಗ್ಯ ಸುದ್ದಿ ಕೇಳಿದ ಕೂಡಲೇ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ.
. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟ ಶರತ್ ಬಾಬು ಅವರು ಅಭಿನಯಿಸಿದ್ದಾರೆ. ರಣಚಂಡಿ, ಕಂಪನ, ಶಕ್ತಿ, ಅಮೃತವರ್ಷಿಣಿ, ಬೃಂದಾವನ, ಹೃದಯ ಹೃದಯ, ನೀಲಾ, ನಮ್ ಯಜಮಾನ್ರು ಸೇರಿದಂತಾ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ