ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ಕುಸಿತ: 13 ಭಕ್ತರು ಸಾವು

ಇಂದೋರ್ : ಮಧ್ಯಪ್ರದೇಶದ ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿತದ ಘಟನೆಯಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಗುರುವಾರ ಮಾಹಿತಿ ನೀಡಿದ್ದಾರೆ.
ಹತ್ತೊಂಬತ್ತು ಜನರನ್ನು ರಕ್ಷಿಸಲಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, 11 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ – ಅದರಲ್ಲಿ 10 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ರಕ್ಷಿಸಲ್ಪಟ್ಟ 19 ಜನರಲ್ಲಿ ಇಬ್ಬರು ಗಾಯಗಳಿಂದ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.
ಪಟೇಲ್ ನಗರ ಪ್ರದೇಶದ ಬೆಳೇಶ್ವರ ಮಹಾದೇವ್ ಜುಲೇಲಾಲ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಮನವಮಿ ಪ್ರಯುಕ್ತ ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಚೌಹಾಣ್ ಸುದ್ದಿಗಾರರಿಗೆ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಮುನ್ನಡೆಸುತ್ತಿದೆ. ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆಗಳು ಎಂದು ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ : ಬ್ರಹ್ಮೋಸ್ ಕ್ಷಿಪಣಿ ಬಳಸಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಮಾಡಿದ ಭಾರತ; ಪಟ್ಟಿ ಇಲ್ಲಿದೆ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement