ಹಾವೇರಿ: ಟಿಕೆಟ್ ಕೈ ತಪ್ಪಿದ ಕಾರಣದಿಂದ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ ಘೋಷಿಸಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಸೇರುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ಹಾನಗಲ್ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಅವರು ಅಲ್ಲಿ ಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಏಪ್ರಿಲ್ 7ರಂದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ತಿಳಿಸಿದ್ದಾರೆ ಹಾಗೂ ತನಗೆ ಬೆಂಬಲ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ..
ನನಗಾದ ಅನ್ಯಾಯಕ್ಕೆ ಅಲ್ಲಿಂದ ಹೊರ ಬಂದಿದ್ದೇನೆ. ಕೈ ಮುಗಿದು ಟಿಕೆಟ್ ಕೇಳಿದೆ. ಇದು ನನ್ನ ಕೊನೆ ಚುನಾವಣೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದೆ. ಆದರೆ ಸೌಜನ್ಯಕ್ಕೂ ನನ್ನ ಮಾತು ಕೇಳಲಿಲ್ಲ. ಬದಲಾಗಿ ನನಗೆ ಪಕ್ಷದಿಂದ ಹೊರ ಹೋಗುವಂತೆ ಮಾಡಿದರು. ಹೀಗಾಗಿ ಕಾಂಗ್ರೆಸ್ ಗೆ ವಿದಾಯ ಹೇಳುತ್ತೀದ್ದೇನೆ ಎಂದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಕಾಂಗ್ರೆಸ್ ನನ್ನ ತಾಯಿ ಇದ್ದಂತೆ. ದ್ರೋಹ ಮಾಡಬಾರದು ಎಂದುಕೊಂಡಿದ್ದೆ. ಆದರೆ ದೂರದ ಹುಬ್ಬಳ್ಳಿಯಿಂದ ಬಂದವರಿಗೆ ಮಣೆ ಹಾಕಿದರು. ಆದರೆ ನನಗೆ ನೋವು ಕೊಟ್ಟರೂ ಪಕ್ಷಕ್ಕಾಗಿ ಕೆಲಸ ಮಾಡಿದೆ. ಪರಿಷತ್ ಸದಸ್ಯನನ್ನಾಗಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಕೊನೆಗೆ ಅದ್ವಾವುದನ್ನೂ ಮಾಡದೆ ಪಕ್ಷದಿಂದ ಹೊರ ಹೋಗುವಂತೆ ಮಾಡಿದರು ಎಂದರು.
ಏಪ್ರಿಲ್ 7ರಂದು ಜೆಡಿಎಸ್ ಪಂಚಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಹಾನಗಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ನಿಮ್ಮ ಕಾಮೆಂಟ್ ಬರೆಯಿರಿ