ವರುಣಾದಿಂದ ವಿಜಯೇಂದ್ರ ಸ್ಪರ್ಧೆ : ಊಹಾಪೋಹಕ್ಕೆ ತೆರೆ ಎಳೆದ ಯಡಿಯೂರಪ್ಪ

posted in: ರಾಜ್ಯ | 0

ಬೆಂಗಳೂರು : ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವರುಣಾದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧೆ ಮಾಡುವ ವಿಚಾರವಾಗಿ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರೆ ಎಳೆದಿದ್ದಾರೆ.
ಪುತ್ರ ವಿಜಯೇಂದ್ರ ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅವರಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕು ಎಂದು’ಒತ್ತಡ ಇದೆ. ಆದರೆ ವರುಣದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನನ್ನ ಕ್ಷೇತ್ರ ಶಿಕಾರಿಪುರದಿಂದಲೇ ಅವರಿಗೆ ಸ್ಪರ್ಧಿಸುವಂತೆ ಸೂಚಿಸಿದ್ದೇನೆ. ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೇಂದು ವರಿಷ್ಠರಿಗೆ ಹೇಳುವೆ. ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದರು.
ನಾಲ್ಕೈದು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement