ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ರಾತ್ರಿಯಲ್ಲಿ ಉರಿಯುತ್ತಿದ್ದ ಸೊಳ್ಳೆ ಬತ್ತಿಗೆ ಬೆಂಕಿಹೊತ್ತಿಕೊಂಡ ನಂತರ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಡಿದ ಕುಟುಂಬದ ಆರು ಸದಸ್ಯರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ರಾತ್ರಿ ವೇಳೆ ಹಚ್ಚಿದ್ದ ಸೊಳ್ಳೆ ಕಾಯಿಲ್‌ ಮನೆಯೊಳಗಿನ ಹಾಸಿಗೆಯ ಮೇಲೆ ಬಿದ್ದಿದೆ, ಹಾಗೂ ಬೆಂಕಿ ಹೊತ್ತಿಕೊಂಡಿದೆ, ಇದರಿಂದ ಬಿಡುಗಡೆಯಾದ ವಿಷಕಾರಿ ಅನಿಲದಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಷಕಾರಿ ಹೊಗೆಯು ಒಳಗಿದ್ದ ಜನರನ್ನು ಪ್ರಜ್ಞೆ ತಪ್ಪುವಂತೆ ಮಾಡಿತು. ಬಳಿಕ ಅವರು ಬೆಂಕಿಯ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ.
ಗುರುವಾರ ರಾತ್ರಿ ಕುಟುಂಬವು ಸೊಳ್ಳೆ ಕಾಯಿಲ್‌ ಹಚ್ಚಿ ಮಲಗಿದ್ದರು ಮತ್ತು ಬೆಳಿಗ್ಗೆ ಎಲ್ಲರೂ ಶವವಾಗಿ ಪತ್ತೆಯಾಗಿದ್ದಾರೆ. ರಾತ್ರಿಯಿಡೀ ಸೊಳ್ಳೆ ಸುರುಳಿಯಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿದ್ದರಿಂದ ಸಾವು ಸಂಭವಿಸಿರಬಹುದು. ಪ್ರಸ್ತುತ, ಘಟನೆಯ ತನಿಖೆ ನಡೆಯುತ್ತಿದೆ, ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸ್ತ್ರಿ ಪಾರ್ಕ್‌ನ ಮಾಚಿ ಮಾರ್ಕೆಟ್‌ನಲ್ಲಿರುವ ಮಜರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಒಂಬತ್ತು ಜನರನ್ನು ಜಗಪ್ರವೇಶಚಂದ್ರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಟಿರ್ಕಿ ಹೇಳಿದ್ದಾರೆ.
ಘಟನೆಯಲ್ಲಿ ಮಹಿಳೆ ಹಾಗೂ ಒಂದೂವರೆ ವರ್ಷದ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. 15 ವರ್ಷದ ಬಾಲಕಿ ಸೇರಿದಂತೆ ಇತರ ಇಬ್ಬರಿಗೆ ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 22 ವರ್ಷದ ಮತ್ತೊಬ್ಬ ಯುವಕನನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement