ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಏಪ್ರಿಲ್ 6 ಅಥವಾ 7 ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್ ನೀಡುವ ಮೊದಲು ಪಕ್ಷವು ವಿಭಿನ್ನ ಜನರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿದೆ. ಬಹುತೇಕ ಏಪ್ರಿಲ್ 6 ಅಥವಾ 7 ರಂದು ಮೊದಲ ಪಟ್ಟಿ ಹೊರಬೀಳಲಿದೆ. ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ರಾಜ್ಯ ಘಟಕ ಶ್ರಮಿಸುತ್ತಿದೆ ಎಂದು ಹೇಳಿದರು.
ಬಿಜೆಪಿಯು ಎಲ್ಲಾ 39 ಸಂಘಟನಾ ಜಿಲ್ಲೆಗಳಲ್ಲಿ ಸ್ಥಳೀಯ ಮುಖಂಡರಿಂದ ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲು ಅಭಿಪ್ರಾಯಗಳನ್ನು ಸಂಗ್ರಹಿಸಿದೆ. ಬಿಜೆಪಿ ಪಕ್ಷವು ರಾಜ್ಯದಲ್ಲಿ 97 ವೀಕ್ಷಕರನ್ನು ನೇಮಿಸಿದ್ದು, ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಏಪ್ರಿಲ್ 1 ಮತ್ತು 2 ರಂದು ನಿಗದಿಯಾಗಿರುವ ಕೋರ್ ಕಮಿಟಿ ಸಭೆಯಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿದ ಹೆಸರುಗಳನ್ನು ಚರ್ಚಿಸಲಾಗುತ್ತದೆ. ಹಾಗೂ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಜನತಾ ದಳ (ಜಾತ್ಯತೀತ) ಎರಡೂ ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಉಳಿದ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಮುಂದಿನ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗುತ್ತಿದೆ.
ಮೇ 10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement