ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ಹೆದ್ದಾರಿ ಟೋಲ್​ ದರ ಹೆಚ್ಚಳ ಆದೇಶ ಹಿಂಪಡೆದ ಎನ್​ ಹೆಚ್​ಎಐ

ರಾಮನಗರ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ಹೆದ್ದಾರಿ (Bengaluru-Mysore Express way) ಟೋಲ್​ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಹೆಚ್ಚಳದ ಆದೇಶವನ್ನು ಹಿಂಡೆದಿದೆ.
ಎನ್​ಹೆಚ್​ಎಐ ಶೇ.22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ ಸಾರ್ವಜನಿಕರಿಂದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಿಂಪಡೆದಿದೆ. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಎನ್​ಹೆಚ್​ಎಐ ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಷ್ಕೃತ ದರ ಇಂದು (ಏಪ್ರಿಲ್​ 1) ರಿಂದ ಜಾರಿಗೆ ಬರಬೇಕಿತ್ತು. ಆದರೆ ಜನಾಕ್ರೋಶ ಹಾಗೂ ಮೈಸೂರು ಸಂಸದ ಪ್ರತಾಪ ಸಿಂಹ ಅವರು ಎನೆಚ್‌ಎಐಗೆ ದರ ಹೆಚ್ಚಳ ಮಾಡದಂತೆ ಒತ್ತಾಯ ಮಾಡಿದ್ದರ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ಕೈಬಿಡಲಾಗಿದೆ ಎನ್ನಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement