ಭಾರತದ ಬಹುತೇಕ ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ ವರೆಗೆ ಸುಡಲಿದೆ ಶಾಖ: ಹವಾಮಾನ ಇಲಾಖೆ

ನವದೆಹಲಿ: ವಾಯುವ್ಯ ಮತ್ತು ಭಾರತದ ಪರ್ಯಾಯ ದ್ವೀಪದ ಭಾಗಗಳನ್ನು (ಮೂರು ಕಡೆ ಸಮುದ್ರಗಳಿಂದ ಆವೃತವಾದ ಭಾಗ) ಹೊರತುಪಡಿಸಿ ಭಾರತದ ಬಹುತೇಕ ಭಾಗಗಳು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಅನುಭವಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು, ಶನಿವಾರ ತಿಳಿಸಿದೆ.
ಈ ಅವಧಿಯಲ್ಲಿ ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದ ಹೆಚ್ಚಿನ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ದಿನಗಳನ್ನು ಎದುರಿಸಬಹುದು ಎಂದು ಊಹಿಸಲಾಗಿದೆ ಎಂದು ಅದು ಹೇಳಿದೆ.
ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಗಣನೀಯವಾಗಿ ಹೆಚ್ಚಿನ ಶಾಖದ ದಿನಗಳನ್ನು ಊಹಿಸಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (IMD) ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮಹಾಪಾತ್ರ ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
2023 ರ ಬಿಸಿ ವಾತಾವರಣದ ಅವಧಿಯಲ್ಲಿ (ಏಪ್ರಿಲ್ ನಿಂದ ಜೂನ್), ದೇಶದ ಹೆಚ್ಚಿನ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ. ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ತಾಪಮಾನದ ಸಾಧ್ಯತೆಯಿದೆ ಎಂದು IMD ಹೇಳಿದೆ.
ಭಾರತದಲ್ಲಿ ಏಪ್ರಿಲ್‌ನಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಬ್ಯೂರೋ ಹೇಳಿದೆ. ವಾಯುವ್ಯ, ಮಧ್ಯ ಮತ್ತು ಪರ್ಯಾಯ ದ್ವೀಪದ ಬಹುತೇಕ ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ, ಆದರೆ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಅದು ಹೇಳಿದೆ

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement