ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಶೋಭಾಯಾತ್ರೆ ವೇಳೆ ಘರ್ಷಣೆ: ಬಿಜೆಪಿ ಶಾಸಕನಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಭಾನುವಾರ ಬಿಜೆಪಿ ರಾಮನವಮಿ ಶೋಭಾಯಾತ್ರೆ ಮೆರವಣಿಗೆ ನಡೆಸುತ್ತಿದ್ದ ವೇಳೆ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಶಾಸಕರೊಬ್ಬರು ಗಾಯಗೊಂಡಿದ್ದಾರೆ.
ಈ ವಾರದ ಆರಂಭದಲ್ಲಿಯೂ, ಬಂಗಾಳದ ಹೌರಾದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗಳು ಸಂಭವಿಸಿದ್ದವು.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು ಸಹ ‘ರಾಮ ನವಮಿ ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದರು. ಗಾಯಗೊಂಡಿರುವ ಶಾಸಕ ಬಿಮನ್ ಘೋಷ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಸ್ಥಳೀಯ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆರವಣಿಗೆಯ ದೃಶ್ಯಗಳು ಕಲ್ಲು ತೂರಾಟದ ನಡುವೆ ಜನರು ಸುರಕ್ಷತೆಗಾಗಿ ಓಡುತ್ತಿರುವುದನ್ನು ತೋರಿಸುತ್ತದೆ. ಮಸೀದಿಯನ್ನು ಗುರಿಯಾಗಿಸಿಕೊಂಡು ವದಂತಿ ಹರಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂದು ಮೂಲಗಳು ತಿಳಿಸಿವೆ.
ಹಿಂಸಾಚಾರಕ್ಕೆ ಕಾರಣರಾದವರನ್ನು ಜೈಲಿಗೆ ಹಾಕಲಾಗುವುದು ಎಂದು ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಹೇಳಿದ್ದಾರೆ.
ಈ ರೀತಿಯ ಗೂಂಡಾಗಿರಿಯು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ತಡೆಯುತ್ತದೆ” ಎಂದು ಬೋಸ್ ಹೇಳಿದರು.
ಇಂದು ನಡೆದ ಹಿಂಸಾಚಾರದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ. “ಬಿಜೆಪಿ ಶೋಭಾ ಯಾತ್ರೆ ಮೇಲೆ ಹೂಗ್ಲಿಯಲ್ಲಿ ದಾಳಿ ನಡೆದಿದೆ. ಕಾರಣ ಸರಳ ಮತ್ತು ಸ್ಪಷ್ಟವಾಗಿದೆ. ಮಮತಾ ಬ್ಯಾನರ್ಜಿ ಹಿಂದೂಗಳನ್ನು ದ್ವೇಷಿಸುತ್ತಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement