ರಾಜ್ಯದಲ್ಲಿ ಭಾನುವಾರ ಹೆಚ್ಚಳ ಕಂಡ ಕೊರೊನಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 284 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಈಗ ರಾಜ್ಯದಲ್ಲಿ 1,410 ಸಕ್ರಿಯ ಪ್ರಕರಣಗಳಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್‌ ತಿಳಿಸಿದ್ದು, ಕಳೆದ 24 ಗಂಟೆಯಲ್ಲಿ 9,043 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬಳ್ಳಾರಿ-20, ಬೆಂಗಳೂರು ಗ್ರಾಮಾತರ 05, ಬೆಂಗಳೂರು ನಗರ 170, ಚಾಮರಾಜನಗರ, ಗದಗ ಹಾಗೂ ಮಂಡ್ಯದಲ್ಲಿ ತಲಾ ಒಬ್ಬರಿಗೆ ಚಿತ್ರದುರ್ಗ, ರಾಯಚೂರು ಮತ್ತು ತುಮಕೂರಿನಲ್ಲಿ ತಲಾ ಇಬ್ಬರಿಗೆ, ದಕ್ಷಿಣ ಕನ್ನಡ, ಕೊಪ್ಪಳ ಮತ್ತು ವಿಜಯಪುರದಲ್ಲಿ ತಲಾ ಮೂವರಿಗೆ, ದಾವಣಗೆರೆ 05, ಧಾರವಾಡ 08, ಹಾಸನ, ಹಾವೇರಿ ಮತ್ತು ಕೋಲಾರ 04, ಕಲಬುರ್ಗಿ 07, ಶಿವಮೊಗ್ಗ 34 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 05 ಸೇರಿದಂತೆ ರಾಜ್ಯದಲ್ಲಿ ಒಟ್ಟು 284 ಕೊರೊನಾ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,77,920ಕ್ಕೆ ಏರಿಕೆಯಾಗಿದೆ. ಇಂದು, ಭಾನುವಾರ 132 ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ 40,36,185 ಮಂದಿ ಗುಣಮುಖರಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement