ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಜೆಡಿಎಸ್‌ನ ಶಿವಲಿಂಗೇಗೌಡ

ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಜೆಡಿಎಸ್‌ (JDS) ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಬೆಂಬಲಿಗರೊಂದಿಗೆ ಆಗಮಿಸಿದ ಶಿವಲಿಂಗೇಗೌಡ ಅವರು ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ನಾಯಕರೊಂದಿಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯ ಕೊನೆವರೆಗೂ ಸರಿಯಾಗಲಿಲ್ಲ. ಹೀಗಾಗಿ ಜೆಡಿಎಸ್‌ ತೊರೆಯುತ್ತಿದ್ದೇನೆ. ಕಾರ್ಯಕರ್ತರ ಅಭಿಪ್ರಾಯದಂತೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತಿದ್ದೇನೆ ಎಂದು ತಿಳಿಸಿದರು.
ನಾನು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗಿದ್ದಕ್ಕೆ ಜೆಡಿಎಸ್‌ನವರು ತಪ್ಪು ತಿಳಿಯಬಾರದು ಎಂದು ಹೇಳುತ್ತೇನೆ. ಎಷ್ಟು ದಿನ ಋಣ ಇರುತ್ತದೆಯೋ ಅಲ್ಲಿವರೆಗೆ ಆ ಪಕ್ಷದಲ್ಲಿ ಇದ್ದೆ. ಈಗ ಋಣ ಮುಗಿಯಿತು. ಹೀಗಾಗಿ ಹೊರಟೆ ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆ ಆಗಲಿದೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement