ಏಪ್ರಿಲ್‌ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ : ಸಿಎಂ ಬೊಮ್ಮಾಯಿ

ಬೆಂಗಳೂರು : ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿದ ಅವರು, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿ ಬಿಡುಗಡೆಯ ಮೊದಲು ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಇದಾದ ನಂತರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಹುತೇಕವಾಗಿ ಏಪ್ರಿಲ್ 8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಮಾಡಿದ ಸಾಧನೆಯ ರಿಪೋರ್ಟ್ ಹಿಡಿದು ಜನರ ಬಳಿ ಮತ ಕೇಳುತ್ತೇವೆ. ಕೊರೊನಾ ಮತ್ತು ಪ್ರವಾಹದಂತಹ ಪ್ರತಿಕೂಲ ಸಂದರ್ಭದಲ್ಲಿಯೂ ಅಭಿವೃದ್ಧಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ದುರಾಡಳಿತ ಬಗ್ಗೆಯೂ ಹೇಳುತ್ತೇವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50ಕ್ಕೂ ಹೆಚ್ಚು ಹಗರಣಗಳು ನಡೆದಿದೆ ಎಂದು ಕಿಡಿಕಾರಿದರು.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement