ಬಿಜೆಪಿ ಪರಿಷತ್‌ ಸದಸ್ಯ ಅಯನೂರು ಮಂಜುನಾಥ ರಾಜೀನಾಮೆ : ಈಶ್ವರಪ್ಪ ವಿರುದ್ಧ ಸ್ಪರ್ಧೆಗೆ ನಿರ್ಧಾರ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಬಿಜೆಪಿ ನಾಯಕ ಅಯನೂರು ಮಂಜುನಾಥ ಶಾಕ್‌ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ
ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ನಿಗೂಢವಾದೆ. ನೈಋತ್ಯ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ ಆಯನೂರು ಮಂಜುನಾಥ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದರು
ಶಿವಮೊಗ್ಗದಲ್ಲಿ ಇಂದು, ಸೋಮವಾರ (ಏಪ್ರಿಲ್ 3) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರವೇ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಮಾಜಿ ಸಚಿವ ಈಶ್ವರಪ್ಪ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ನಾನು ಬಡವರ ಪ್ರತಿನಿಧಿಯಾಗಿ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡುತ್ತೇನೆ. ನನ್ನನ್ನ ಚುನಾವಣಾ ಕಣದಲ್ಲಿ ಅವರು ಎದುರಿಸಲಿ ಎಂದು ಈಶ್ವರಪ್ಪಗೆ ಸವಾಲು ಹಾಕಿದರು. ನಾನೇ ಬಿಜೆಪಿಗೆ ಒತ್ತಾಯ ಮಾಡುವುದೇನೆಂದರೆ ನೀವು ಈಶ್ವರಪ್ಪ ಅಥವಾ ಮಗನಿಗೆ ಟಿಕೆಟ್‌ ಕೊಡಿ ಒತ್ತಾಯ ಮಾಡುತ್ತೇನೆ. ನಾನಂತೂ ಸ್ಪರ್ಧಿಸುವುದು ಶತಃ ಸಿದ್ಧ ಎಂದು ಹೇಳಿದರು.
ಈ ಬಾರಿ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ಕೊಡಬೇಕು ಎಂದು ಪಕ್ಷದ ವೇದಿಕೆಯಲ್ಲಿಯೂ ಅನೇಕ ಬಾರಿ ಮನವಿ ಮಾಡಿಕೊಂಡಿದ್ದೇನೆ. ಆದರೆ ಬಿಜೆಪಿಯಲ್ಲಿ ಟಿಕೆಟ್ ಸಿಗುವ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಬದಲಾಗಿ ಕೆಲವರ ಮಕ್ಕಳ ಹೆಸರುಗಳು ಓಡಾಡುತ್ತಿವೆ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ. ನನ್ನ ವಿರುದ್ಧ ಯಾರು ಸ್ಪರ್ಧಿಸಲಿದ್ದಾರೆ ಎಂದು ಯೋಚಿಸುವುದಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement