ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ.
ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ರಾಜಾಜಿನಗರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಮೊದಲಾದೆಡೆ ಮಳೆ ಸುರಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement