ಮದುವೆಯಲ್ಲಿ ಉಡುಗೊರೆ ಬಂದಿದ್ದ ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಕವರ್ಧಾ (ಛತ್ತೀಸಗಢ) : ಮನೆಯಲ್ಲಿ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಮತ್ತು ಆತನ ಹಿರಿಯ ಸಹೋದರ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಛತ್ತೀಸಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಏಪ್ರಿಲ್ 1 ರಂದು ವಿವಾಹವಾದ ಹೇಮೇಂದ್ರ ಮೆರಾವಿಗೆ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಅನ್ನು ಮದುವೆಯ ಉಡುಗೊರೆಯಾಗಿ ನೀಡಲಾಗಿತ್ತು, ಮರುದಿನ, ಹೇಮೇಂದ್ರ ಮೆರಾವಿ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಅನ್ನು ಪರಿಶೀಲಿಸಲು ಯೋಚಿಸಿದಾಗ ಕುಟುಂಬವು ಮದುವೆಯ ಉಡುಗೊರೆಗಳನ್ನು ಬಿಚ್ಚಿದೆ.
22ರ ಹರೆಯದ ಮೆರಾವಿ ವೈರ್‌ ಅನ್ನು ಎಲೆಕ್ಟ್ರಿಕ್ ಬೋರ್ಡ್‌ಗೆ ಜೋಡಿಸಿ ನಂತರ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಸ್ವಿಚ್ ಆನ್ ಮಾಡಿದಾಗ, ದೊಡ್ಡ ಸ್ಫೋಟ ಸಂಭವಿಸಿದೆ ಮತ್ತು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಕಬೀರ್ಧಾಮ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮನೀಶಾ ಠಾಕೂರ್ ಹೇಳಿದ್ದಾರೆ.

ಸ್ಫೋಟದ ತೀವ್ರತೆಯು ಹೋಮ್ ಥಿಯೇಟರ್ ವ್ಯವಸ್ಥೆಯನ್ನು ಇರಿಸಲಾಗಿದ್ದ ಕೋಣೆಯ ಗೋಡೆಗಳು ಮತ್ತು ಛಾವಣಿಯು ಕುಸಿಯುವಂತೆ ಮಾಡಿದೆ.
ಸ್ಫೋಟದಿಂದಾಗಿ ಮೆರಾವಿಯ ಹಿರಿಯ ಸಹೋದರ ರಾಜಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕವ್ರಾದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಮೆರಾವಿ ಅವರ ಸಹೋದರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಋೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.
ರೆಂಗಾಖರ್ ಪೊಲೀಸ್ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ಪ್ರಕಾರ, ಕೊಠಡಿಯ ತನಿಖೆಯಲ್ಲಿ ಸ್ಫೋಟಕ್ಕೆ ಕಾರಣವಾಗಬಹುದಾದ ಯಾವುದೇ ಸುಡುವ ವಸ್ತು ಪತ್ತೆಯಾಗಿಲ್ಲ. ಅವರ ಪ್ರಕಾರ ಆ ಮ್ಯೂಸಿಕ್ ಸಿಸ್ಟಂ ಮಾತ್ರ ಆ ಕೋಣೆಯಲ್ಲಿದ್ದ ಬೆಂಕಿ ಹತ್ತಿಕೊಂಡು ಸ್ಫೋಟಗೊಳ್ಳುವ ಸಾಧನವಾಗಿತ್ತು. ತನಿಖೆಯ ವೇಳೆ ಸ್ಫೋಟದ ಕಾರಣವನ್ನು ಕಂಡುಹಿಡಿಯಲಾಗುವುದು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement