ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಬೆಂಗಳೂರು : ಇದ್ರೀಷ್ ಪಾಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ.
ಮಾರ್ಚ್ 31 ರಂದು ಕನಕಪುರದ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ಈ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಬಂಧನವಾಗಿದೆ. ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಮೃತನನ್ನು ಮಂಡ್ಯ ಮೂಲದ ಇದ್ರಿಷ್ ಪಾಷಾ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಕೊಲೆ ಪ್ರಕರಣ ದಾಖಲಾಗುತ್ತಲೆ ಆರೋಪಿಗಳು ತಲೆಮರೆಸಿಕೊಂಡಿದ್ದರು
ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. . ರಾಜಸ್ಥಾನದಿಂದ ಆರೋಪಿಗಳನ್ನು ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement