ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ ಎಂದು ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಿಚ್ಚ ಸುದೀಪ್ ಅವರನ್ನು ತನ್ನ ಸ್ಟಾರ್ ಪ್ರಚಾರಕ ಎಂದು ಬಿಜೆಪಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಸಂಸದ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಯಾರನ್ನು ಬೆಂಬಲಿಸಬೇಕು ಎಂಬುದನ್ನು ಆಯ್ಕೆ ಮಾಡಲು ನಟ ಸುದೀಪ್‌ ಅವರು ಸ್ವತಂತ್ರರು ಎಂದು ಹೇಳಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು ಸಿನಿಮಾ ತಾರೆಯರಲ್ಲ ಎಂದು ಸುರ್ಜೇವಾಲಾ ಹೇಳಿದ್ದಾರೆ.
ಸಿನಿಮಾ ನಟರು ಯಾರನ್ನು ಬೆಂಬಲಿಸಬೇಕೆಂದು ಆಯ್ಕೆ ಮಾಡಲು ಸ್ವತಂತ್ರರು, ಕೆಲವೊಮ್ಮೆ ಐಟಿ ಇಡಿ ಅಥವಾ ಬೇರೆ ರೀತಿ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಕರ್ನಾಟಕದಲ್ಲಿ ಬಿಜೆಪಿ ದಿವಾಳಿತನ ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಮಾತುಗಳನ್ನು ಕೇಳಲು ಯಾರೂ ಸುಳಿಯದ ಕಾರಣ, ಅವರು ಈಗ ಮತದಾರರನ್ನು ಸೆಳೆಯಲು ಚಲನಚಿತ್ರ ತಾರೆಯರನ್ನು ಅವಲಂಬಿಸಿದ್ದಾರೆ. ಸಿನಿಮಾ ತಾರೆಯರಲ್ಲ, ಜನಸಮೂಹ, ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.
ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ ಎಂದು ವ್ಯಂಗ್ಯವಾಡಿದೆ. ಯಡಿಯೂರಪ್ಪ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಹೇಳಿದೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಇದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ, ಸರ್ಕಾರ ಸಿನಿಮಾ ನಟರ ಮೇಲೆ ಒತ್ತಡ ಹಾಕಿರಬಹುದು ಅಥವಾ ಸುದೀಪ್ ಬಳಿ ಮನವಿ ಮಾಡಿಕೊಂಡಿರಬಹುದು. ಈ ಹಿಂದೆ ನಾನು ಸುದೀಪ್ ಭೇಟಿಯಾಗಿದ್ದೆ. ಆಗ ರಾಜಕೀಯ ಉದ್ದೇಶದಿಂದ ನಾನು ಸುದೀಪ್ ಭೇಟಿಯಾಗಿರಲಿಲ್ಲ. ನಾನು ಸುದೀಪ್ ಹಳೇ ಸ್ನೇಹಿತರು. ನನ್ನ ಮತ್ತು ಸುದೀಪ್ ನಡುವೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಕನ್ನಡ ನಟ ಸುದೀಪ ಅವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು ಮತ್ತು ಬೊಮ್ಮಾಯಿ ಅವರು ಯಾವುದೇ ಪಕ್ಷದಲ್ಲಿದ್ದರೂ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ| ಕಬ್ಬು ದರ ನಿಗದಿ ; ಸಿಎಂ ಸಭೆಗೂ ಮುನ್ನ ಕೈಕೈ ಮಿಲಾಯಿಸಿದ ಇಬ್ಬರು ರೈತ ನಾಯಕರ ಬೆಂಬಲಿಗರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement