ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ.
ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಂತಿಗೆ ಇಬ್ಬರೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿನಲ್ಲಿ ಯಾವುದೆ ಅನುಮಾವ ಇರುವುದಿಲ್ಲ ಎಂದು ಮೃತರ ಸಹೋದರ ಅನಂತ ತಿಪ್ಪಯ್ಯ ನಾಯ್ಕ ಹೊನ್ನಾವರ ಪೋಲಿಸ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮರಣೊತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement