ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಈಗ ಗಣ್ಯರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲು ಆರಂಭ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನ ನೀಡಲಾಗಿದೆ. ಮೋದಿ ಮಂಡ್ಯ ಸಂಸದೆ ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ. ಇದೇ ಫೋಟೊಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇದಲ್ಲದೆ ಉಪರಾಷ್ಟ್ರಪತಿ ಜಗದೀಶ ಧನಕರ, ಗೃಹ ಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅನುರಾಗ ಠಾಕೂರ್‌ ಮೊದಲಾದವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ.
ಅಭಿಷೇಕ್-ಅವಿವಾ ಅವರ ಮದುವೆ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ. ಇತ್ತೀಚಿಗಷ್ಟೇ ಅಭಿಷೇಕ್- ಅವಿವಾ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿತ್ತು. ಈಗ ಜೂನ್ 5ಕ್ಕೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ಸಿನಿಮಾ ರಂಗ-ರಾಜಕೀಯ ರಂಗದ ಗಣ್ಯರು ಮದುವೆಗೆ ಭಾಗಿಯಾಗಲಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement