
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಹಿರಿಯ ಕರಕುಶಲ ಕಲಾವಿದರಾದ ಶಾ ರಶೀದ್ ಅಹ್ಮದ್ ಕ್ವಾದ್ರಿ ನಡುವಿನ ಹೃದಯಸ್ಪರ್ಶಿ ಮಾತಿನ ವಿನಿಮಯವು ಬುಧವಾರ ಸಂಜೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ಬಿದರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಅವರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಧಾನಿ ಮೋದಿಯನ್ನು ಅಭಿನಂದಿಸಲು ಬಂದಾಗ “ನೀವು ನನ್ನನ್ನೇ ತಪ್ಪು ಎಂದು ಸಾಬೀತುಪಡಿಸಿದ್ದೀರಿ” ಎಂದು ಮಾರ್ಮಿಕವಾಗಿ ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಸ್ವೀಕರಿಸಿದ ಕ್ವಾದ್ರಿ ಅವರು ಪ್ರಧಾನಿಯವರಿಗೆ ಹಸ್ತಲಾಘವ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ನನಗೆ ಪದ್ಮ ಗೌರವ ಸಿಗುವುದಿಲ್ಲ ಎಂದು ಭಾವಿಸಿದ್ದೆ ಎಂದು ಅವರು ಹೇಳಿದ್ದು ಕೇಳಿಬಂದಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸಿದ್ದೆ, ಆದರೆ ನನಗೆ ಅದು ಸಿಗಲಿಲ್ಲ, ನಿಮ್ಮ ಸರ್ಕಾರ ಬಂದಾಗ, ಬಿಜೆಪಿ ಸರ್ಕಾರ ನನಗೆ ಯಾವುದೇ ಪ್ರಶಸ್ತಿ ನೀಡುವುದಿಲ್ಲ ಎಂದು ನಾನು ಭಾವಿಸಿದ್ದೆ, ಆದರೆ ನೀವು ನನ್ನನ್ನೇ ತಪ್ಪು ಭಾವಿಸಿದ್ದೆ ಎಂಬುದನ್ನು ಸಾಬೀತುಪಡಿಸಿದ್ದೀರಿ, ನಾನು ನಿಮಗೆ ನನ್ನ ಪ್ರಾಮಾಣಿಕ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಅವರು ಹೇಳಿದರು. ಪ್ರಧಾನಮಂತ್ರಿಯವರು ನಮಸ್ತೆ ಮತ್ತು ನಗುವಿನೊಂದಿಗೆ ಪ್ರತ್ಯುತ್ತರ ನೀಡಿದರು.

ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ — ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು 2019 ರಿಂದ ಯಾರಿಗೂ ನೀಡಲಾಗಿಲ್ಲ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಪದ್ಮ ವಿಭೂಷಣ ಮತ್ತು ಲೇಖಕಿ- ಸುಧಾ ಮೂರ್ತಿ, ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದವರಲ್ಲಿ ಸೇರಿದ್ದಾರೆ.
ಸುಧಾ ಮೂರ್ತಿ ಅವರ ಪುತ್ರಿ ಹಾಗೂ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿಯಾಗಿರುವ ಅಕ್ಷತಾ ಮೂರ್ತಿ ಅವರು ರಾಷ್ಟ್ರಪತಿ ಭವನದ ಭವ್ಯ ದರ್ಬಾರ್ ಹಾಲ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ ಅವರ ಮುಂದಿನ ಸಾಲಿನಲ್ಲಿ ಇತರ ಗಣ್ಯರೊಂದಿಗೆ ಕುಳಿತಿದ್ದರು. ಸುಧಾ ಮೂರ್ತಿ ಅವರ ಪತಿ ಮತ್ತು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರು ಇತರ ಅತಿಥಿಗಳು ಮತ್ತು ಕುಟುಂಬ ಸದಸ್ಯರ ನಡುವೆ ಕುಳಿತಿದ್ದರು.
ಈ ಕಾರ್ಯಕ್ರಮದಲ್ಲಿ ಅಖಿಲೇಶ್ ಯಾದವ್ ಅವರ ಇಡೀ ಕುಟುಂಬ ಕೂಡ ಉಪಸ್ಥಿತರಿದ್ದರು.
ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಗಳಂತಹ ವಿವಿಧ ವಿಭಾಗಗಳು ಮತ್ತು ಚಟುವಟಿಕೆಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಪದ್ಮವಿಭೂಷಣ, ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ; ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ; ಮತ್ತು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ ನೀಡಲಾಗುತ್ತದೆ.


ನಿಮ್ಮ ಕಾಮೆಂಟ್ ಬರೆಯಿರಿ