ನಟಿ ಖುಷ್ಬೂ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಅನಾರೋಗ್ಯದಿಂದಾಗಿ ಶುಕ್ರವಾರ ಜ್ವರದಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ, ಮೈ ಕೈ ನೋವು ಮತ್ತು ದೌರ್ಬಲ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಏಪ್ರಿಲ್ 7ರಂದು ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಖುಷ್ಬು ಅವರು ಆಸ್ಪತ್ರೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಾನು ಅಡೆನೊ ವೈರಸ್ ಸೋಂಕಿಗೆ ಒಳಗಾಗಿದ್ದು, ತುಂಬಾ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದಾರೆ. ಇನ್ನು ಯಾರಿಗೇ ಆದರೂ ವೈರಸ್ ತಗುಲಿರುವ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸಬೇಡಿ ಎಂದು ಖುಷ್ಬೂ ಟ್ವಿಟರ್ ವೇದಿಕೆಯಲ್ಲಿ ಸಲಹೆ ನೀಡಿದ್ದಾರೆ.
“ನಾನು ಹೇಳುತ್ತಿರುವಂತೆ, ಜ್ವರ ಕೆಟ್ಟದಾಗಿದೆ. ಅದು ನನ್ನ ಮೇಲೆ ಪರಿಣಾಮ ಬೀರಿದೆ. ಅತಿ ಹೆಚ್ಚು ಜ್ವರ, ಮೈಕೈ ನೋವು ಮತ್ತು ದೌರ್ಬಲ್ಯವನ್ನುಂಟು ಮಾಡುತ್ತದೆ. ಯಾವುದೇ ರೋಗ ಚಿಹ್ನೆಗಳನ್ನು ನಿರ್ಲಕ್ಷಿಸಬೇಡಿ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement