ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊರ್ವ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡ ಘಟನೆ ನಡೆದಿದೆ.
ಹುಣಸೂರು ತಾಲೂಕಿನ ತೊಂಡಾಳು ಗ್ರಾಮದ ರಾಜಶೆಟ್ಟಿ(41) ಎಂಬವರು ಮರ್ಮಾಂಗ ಕತ್ತರಿಸಿಕೊಂಡಿದ್ದು, ಮೈಸೂರು ಕೆ.ಆರ್.ಆಸ್ಪತ್ರೆಯ ಚುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಕುಡಿತಕ್ಕೆ ದಾಸನಾಗಿದ್ದ ರಾಜಶೆಟ್ಟಿ, ಕೆ.ಆರ್.ನಗರ ಬಾರ್‌ನಲ್ಲಿ ಮದ್ಯ ಸೇವಿಸಿ ಚಾಕುವಿನಿಂದ ತನ್ನ ಮರ್ಮಾಂಗವನ್ನು ಕೊಯ್ದುಕೊಂಡು ಅಸ್ಪಸ್ಥನಾಗಿ ಬಿದ್ದಿದ್ದನ್ನು ಕಂಡವರು ಕೆ.ಆರ್.ನಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಆರ್.ಆಸ್ಪತ್ರೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು ಚೇತರಿಸಿಕೊಳ್ಳುತ್ತಿದ್ದಾನೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ