ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಮಾಜಿ ಕಾಂಗ್ರೆಸ್ ನಾಯಕ ಮತ್ತು ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ  ಮರಿ ಮೊಮ್ಮಗ, ಸಿ.ಆರ್. ಕೇಶವನ್ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಕೇಶವನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು ಮತ್ತು ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸುಧಾರಣೆ ಕಾರ್ಯಸೂಚಿಗಳು ಭಾರತವನ್ನು ಪರಿವರ್ತಿಸಿವೆ ಎಂದು ಹೇಳಿದರು.
“ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಸುಧಾರಣೆ-ನೇತೃತ್ವದ ಅಂತರ್ಗತ ಅಭಿವೃದ್ಧಿ ಕಾರ್ಯಸೂಚಿಗಳು ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಗೆ ಪರಿವರ್ತಿಸಿವೆ” ಎಂದು ಕೇಶವನ್ ಹೇಳಿದರು.
ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ಸೇರಿಸಿದ್ದಕ್ಕಾಗಿ ನಾನು ಬಿಜೆಪಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಅದು ಕೂಡ ನಮ್ಮ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುವ ದಿನದಂದು ಎಂದು ಹೇಳಿದರು.

ಕೇಶವನ್ ಅವರು ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಜನರಿಗೆ ‘ಪಕ್ಕಾ’ ಮನೆ ಸಿಕ್ಕಿದೆ ಮತ್ತು ಮೂರು ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಕೇಶವನ್ ಫೆಬ್ರವರಿ 23 ರಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಕೇಶವನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಸರಣಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ ನಂತರ ಪಕ್ಷದಿಂದ ಬೇರ್ಪಟ್ಟ ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರು ಕಾಂಗ್ರೆಸ್‌ ತೊರೆದ ಒಂದು ತಿಂಗಳೊಳಗೆ ಕೇಶವನ್‌ ರಾಜೀನಾಮೆ ನೀಡಿದ್ದರು.
ಇದಕ್ಕೂ ಮೊದಲು, ಏಪ್ರಿಲ್ 6 ರಂದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಮತ್ತು ಪಕ್ಷದ ಹಿರಿಯ ನಾಯಕರಾದ ತರುಣ್ ಚುಗ್ ಮತ್ತು ಅನಿಲ್ ಬಲುನಿ ಉಪಸ್ಥಿತರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement