ಬಾಗೇಪಲ್ಲಿಯಲ್ಲಿ 2.66 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.66 ಕೋಟಿ ಮೌಲ್ಯದ 5.59 ಕೆ.ಜಿ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡಿರುವ ಚಿನ್ನಾಭರಣಗಳನ್ನು ಆಂಧ್ರಪ್ರದೇಶದ ಕರ್ನೂಲಿನ ಚಿನ್ನಾಭರಣ ಮಾರಾಟ ಅಂಗಡಿಯಿಂದ ವಿಜಯವಾಡದ ಚಿನ್ನಾಭರಣ ಮಾರಾಟ ಅಂಗಡಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಕಾರಿನಲ್ಲಿದ್ದವರು ತಿಳಿಸಿದ್ದಾರೆ.
ಆದರೆ, ಗಡಿ ಭಾಗದ ಬಾಗೇಪಲ್ಲಿ ಚೆಕ್‌ ಪೋಸ್ಟ್‌ಗೆ ಏಕೆ ಬಂದರು ಎಂದು ಅಧಿಕಾರಿಗಳು ಅನುಮಾನಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಕರ್ನಾಟಕದ ಗಡಿ ಭಾಗದ ಚೆಕ್‌ಪೋಸ್ಟ್‌ಗೆ ಬಂದಿದ್ದರಿಂದ ಚಿನ್ನ ವಶಕ್ಕೆ ಪಡೆದು ದೂರು ದಾಖಲಿಸಲಾಗಿದೆ. ಸದ್ಯಕ್ಕೆ ಚಿನ್ನವನ್ನು ನ್ಯಾಯಾಲಯದ ವಶಕ್ಕೆ ನೀಡಲಾಗಿದೆ’ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement