ವೀಡಿಯೊ : ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ 150 ಗುಂಡು ಹಾರಿಸಿದ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ಪುತ್ರ, ಸಹೋದರ

ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ವೈರಲ್ ಆಗಿದ್ದು, ಜೈಲಿನಲ್ಲಿರುವ ಗ್ಯಾಂಗ್‌ ಸ್ಟರ್‌-ರಾಜಕಾರಣಿ ಅತಿಕ್ ಅಹ್ಮದ್ ಕುಟುಂಬ ಸದಸ್ಯರು, ಹಾಗೂ ಕೆಲವು ಜನರು ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ 150 ಕ್ಕೂ ಹೆಚ್ಚು ಗುಂಡುಗಳನ್ನು ಹಾರಿಸುತ್ತಿರುವುದು ಕಂಡುಬಂದಿದೆ.
ದಿನಾಂಕ ನಿಗದಿ ಮಾಡದ ಎರಡೂವರೆ ನಿಮಿಷದ ವೀಡಿಯೊದಲ್ಲಿ, ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದ ಸಮಾರಂಭದಲ್ಲಿ ಕೆಲವರು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅತೀಕ್ ಅಹ್ಮದ್ ಅವರ ಸಹೋದರ ಅಶ್ರಫ್ ಅಹ್ಮದ್ ತನ್ನ ಜೇಬಿನಿಂದ ಪಿಸ್ತೂಲ್ ಅನ್ನು ಹೊರತೆಗೆದು ಅತೀಕ್ ಅಹ್ಮದ್ ಅವರ ಮಗ ಅಲಿ ಅಹ್ಮದ್ ಅವರಿಗೆ ನೀಡಿದಾಗ ಅವರು ಗಾಳಿಯಲ್ಲಿ ನಿರಂತರವಾಗಿ ಗುಂಡು ಹಾರಿಸಿದರು. ಬಳಿಕ ಅಶ್ರಫ್ ಅಹಮದ್ ಪಿಸ್ತೂಲ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಉಮೇಶ್ ಪಾಲ್ ಪ್ರಕರಣದಲ್ಲಿ ಅತೀಕ್ ಅಹಮದ್, ಇಬ್ಬರಿಗೆ ಜೀವಾವಧಿ ಶಿಕ್ಷೆ
ಕಳೆದ ತಿಂಗಳು, ಪ್ರಯಾಗರಾಜ್‌ನಲ್ಲಿರುವ ಎಂಪಿ-ಎಂಎಲ್‌ಎ ನ್ಯಾಯಾಲಯವು 2006 ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಮಂಗಳವಾರ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿತು.
ಅತೀಕ್ ಅಹಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರಿಗೆ ನ್ಯಾಯಾಲಯ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉಮೇಶ್ ಪಾಲ್ ಪ್ರಕರಣದಲ್ಲಿ ಅತೀಕ್ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಬಿಎಸ್‌ಪಿ ಶಾಸಕ ರಾಜುಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 24 ರಂದು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅವರ ಅಂಗರಕ್ಷಕರೊಬ್ಬರು ದಾಳಿಯಲ್ಲಿ ಗಾಯಗೊಂಡರು ಮತ್ತು ನಂತರ ಅವರು ಮೃತಪಟ್ಟರು.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಅಂಗರಕ್ಷಕರಲ್ಲಿ ಒಬ್ಬರು ಎಸ್‌ಯುವಿಯಿಂದ ಹೊರಬಂದಾಗ ಇಬ್ಬರು ವ್ಯಕ್ತಿಗಳು ಹಿಂದಿನಿಂದ ಗುಂಡು ಹಾರಿಸುವುದು ಕಂಡುಬಂದಿದೆ.

ಶೈಸ್ತಾ ಪರ್ವೀನ್ ಬಂಧನಕ್ಕೆ ಬಹುಮಾನ ಘೋಷಿಸಿದ ಪೊಲೀಸರು
ಪ್ರಯಾಗರಾಜ್ ಪೊಲೀಸರು ಉಮೇಶ್ ಪಾಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಅತೀಕ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರನ್ನು ಬಂಧಿಸಲು ಸಹಾಯ ಮಾಡುವವರಿಗೆ 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಉಮೇಶ್ ಪಾಲ್ ಹತ್ಯೆಯ ನಂತರ ಶೈಸ್ತಾ ಪರ್ವೀನ್ ಸದ್ಯ ತಲೆಮರೆಸಿಕೊಂಡಿದ್ದಾಳೆ.
ಶೈಸ್ತಾ ಪರ್ವೀನ್‌ಗೆ ಕೊಲೆಯ ಬಗ್ಗೆ ಮಾಹಿತಿ ಇತ್ತು ಮತ್ತು ಪಿತೂರಿಯ ಭಾಗವಾಗಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಬೇಕಾಗಿರುವ ಶೂಟರ್‌ಗಳಲ್ಲಿ ಒಬ್ಬನಾದ ಸಬೀರ್ ಮತ್ತು ಇತರ ಕೆಲವರೊಂದಿಗೆ ಶೈಸ್ತಾ ಇರುವ ವಿಡಿಯೋ ವೈರಲ್ ಆಗಿದೆ.
ಗುರುವಾರ, ಪ್ರಯಾಗರಾಜ್ ನ್ಯಾಯಾಲಯವು ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಶೈಸ್ತಾ ಪರ್ವೀನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement