ದಾವಣಗೆರೆಯಲ್ಲಿ ಚಿತ್ರ ನಿರ್ಮಾಪಕ ಬೋನಿ ಕಪೂರಗೆ ಸೇರಿದ 39 ಲಕ್ಷ ರೂ ಮೌಲ್ಯದ ಬೆಳ್ಳಿ ವಸ್ತುಗಳು ವಶ

ದಾವಣಗೆರೆ : ಶುಕ್ರವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ದಾವಣಗೆರೆಯ ಹೊರವಲಯದಲ್ಲಿರುವ ಹೆಬ್ಬಾಳು ಟೋಲ್ ಬಳಿಯ ಚೆಕ್ ಪೋಸ್ಟ್‌ನಲ್ಲಿ ಬಾಲಿವುಡ್ ಚಲನಚಿತ್ರ ನಿರ್ಮಾಪಕ ಬೋನಿ ಕಪೂರ್ ಅವರಿಗೆ ಸೇರಿದ್ದು ಎನ್ನಲಾದ 39 ಲಕ್ಷ ರೂಪಾಯಿ ಮೌಲ್ಯದ 66 ಕೆಜಿ ಬೆಳ್ಳಿ ವಸ್ತುಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ವಶಪಡಿಸಿಕೊಂಡಿದೆ.
ಚೆನ್ನೈನಿಂದ ಮುಂಬೈಗೆ ಬಿಎಂಡಬ್ಲ್ಯು ಕಾರಿನಲ್ಲಿ ಐದು ಬಾಕ್ಸ್‌ಗಳಲ್ಲಿ ಸರಿಯಾದ ದಾಖಲೆಗಳಿಲ್ಲದೆ ಬೆಳ್ಳಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು.
ಚುನಾವಣಾ ಆಯೋಗದ ಅಧಿಕಾರಿಗಳು ಬೆಳ್ಳಿಯ ಬಟ್ಟಲುಗಳು, ಚಮಚಗಳು, ನೀರಿನ ಮಗ್ಗಳು ಮತ್ತು ತಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಚಾಲಕ ಸುಲ್ತಾನ್ ಖಾನ್ ಜೊತೆಗೆ ಕಾರಿನಲ್ಲಿದ್ದ ಹರಿ ಸಿಂಗ್ ಎಂಬಾತನ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ಸಮಯದಲ್ಲಿ, ಕಾರು ಬೋನಿ ಕಪೂರ್ ಒಡೆತನದ ಬೇವ್ಯೂ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಕಂಡುಬಂದಿದೆ.
ತನಿಖೆ ವೇಳೆ ಹರಿ ಸಿಂಗ್ ಅವರು ಬೆಳ್ಳಿಯ ವಸ್ತುಗಳು ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದವು ಎಂದು ಒಪ್ಪಿಕೊಂಡಿದ್ದಾರೆ.ಸೂಕ್ತ ದಾಖಲೆಗಳನ್ನು ನೀಡದ ಕಾರಣ ಬೆಳ್ಳಿ ವಸ್ತುಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆ ಬೆಳ್ಳಿಯ ವಸ್ತುಗಳು ನಿರ್ಮಾಪಕ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ್ದು ಎಂಬುದದು ಹೌದೋ ಅಲ್ಲವೋ ಎಂಬುದರ ಬಗ್ಗೆ ಅವರು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement