ʼಕಾಂಗ್ರೆಸ್ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ’: ಪಕ್ಷೇತರನಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

posted in: ರಾಜ್ಯ | 0

ಚಿಕ್ಕಮಗಳೂರು: ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ನೀಡದೆ ವಂಚಿಸಿ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಸಲುವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ವೈ.ಎಸ್.ವಿ.ದತ್ತ ಹೇಳಿದ್ದಾರೆ.
ಅನೇಕ ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ಭರವಸೆ ನೀಡಿ, ಕಾಂಗ್ರೆಸ್‌ ವಿಶ್ವಾಸವನ್ನು ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ..

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಏಪ್ರಿಲ್ 13ರಂದು ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ.
ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಆದರೆ ಜನರ ಪ್ರೀತಿ ವಿಶ್ವಾಸ ಗಳಿಸಿದ್ದೇನೆ ಎಂದು ಹೇಳಿದರು.
ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, ನಮ್ಮ ದತ್ತಣ್ಣ’ ಎಂದು ಅಭಿಮಾನದಿಂದ ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.
ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.
ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಹಾಜರಿದ್ದರು.
ಕಾಂಗ್ರೆಸ್‌ಗೆ ಕಡೂರು ಕ್ಷೇತ್ರಕ್ಕೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ಘೋಷಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement