ಭದ್ರಾ ನದಿಯಲ್ಲಿ ಮುಳುಗಿ ತಂದೆ, ಮಗ ಸಾವು

posted in: ರಾಜ್ಯ | 0

ಚಿಕ್ಕಮಗಳೂರು: ಜಿಲ್ಲೆಯ ಮಾಗುಂಡಿ ಬಳಿ ಭದ್ರಾ ನದಿಯಲ್ಲಿ ಮುಳುಗಿ ತಂದೆ ಮಗ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ(40 ವರ್ಷ) ಮತ್ತು ಅವರ ಮಗ ಸಾತ್ವಿಕ(13 ವರ್ಷ) ಎಂದು ಗುರುತಿಸಲಾಗಿದೆ. ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಹೋದಾಗ ಈ ದುರ್ಘಟನೆ ನಡೆದಿದೆ.
ಮನೆಯ ಸಮೀಪದಲ್ಲೇ ಹರಿಯುತ್ತಿರುವ ಭದ್ರಾ ನದಿಯ ಬಳಿಗೆ ಸಂಬಂಧಿಕರೆಲ್ಲ ಸೇರಿ ಹೋಗಿದ್ದಾರೆ. ಹೊಳೆಯಲ್ಲಿ ಬಂಡೆಯೊಂದರ ಮೇಲೆ ನಿಂತಿದ್ದ ಸಾತ್ವಿಕ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ಮಗನನ್ನು ರಕ್ಷಿಸಲು ತಂದೆ ಲೋಕೇಶ ಸಹ ನದಿಗೆ ಬಿದ್ದಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಸಂಬಂಧಿಕರು ನಡೆಸಿದ ಪ್ರಯತ್ನ ವಿಫಲವಾಗಿದೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ರಾತ್ರಿ ಹಂಡುಗುಳಿ ಗ್ರಾಮಕ್ಕೆ ತರಲಾಗಿದೆ.ಮೃತರ ಕುಟುಂಬ, ಸಂಬಂಧಿಕರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement