ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ನವದೆಹಲಿ: ದೆಹಲಿಯಲ್ಲಿ ಮಹತ್ವದ ಸಭೆಗಳ ನಡುವೆ ಸೋಮವಾರ (ಏಪ್ರಿಲ್ 10) ರಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶನಿವಾರ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಕ್ಕೆ ಹೈಕಮಾಂಡ್‌ ಮತ್ತು ರಾಜ್ಯ ಬಿಜೆಪಿ ನಾಯಕರು ಅಭ್ಯರ್ಥಿಗಳ ಬಗ್ಗೆ ಎಲ್ಲಾ ಪೂರ್ವಪರ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಟಿಕೆಟ್‌ ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಹೆಸರುಗಳ ಕುರಿತು ಶನಿವಾರ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಂಜೆ ಮತ್ತೊಮ್ಮೆ ಸಭೆ ಸೇರಲಿದೆ.
ಭಾನುವಾರ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ನಡೆಸಿ ಭಾನುವಾರ ಸಂಜೆ ದೆಹಲಿಗೆ ವಾಪಸಾಗಲಿದ್ದಾರೆ. ನಂತರ ಸಭೆ ನಡೆಯಲಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement