ಕರ್ನಾಟಕ ವಿಧಾನಸಭೆ ಚುನಾವಣೆ 2023 : 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ

posted in: ರಾಜ್ಯ | 0

ಬೆಂಗಳೂರು: ಕಳೆದ 10 ದಿನಗಳಲ್ಲಿ ಚುನಾವಣಾ ಆಯೋಗ ಸುಮಾರು 100 ಕೋಟಿ ರೂ.ಗಳಷ್ಟು ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ.
ದೈನಂದಿನ ಬುಲೆಟಿನ್ ಪ್ರಕಾರ, ಮಾರ್ಚ್ 29 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಾಗಿನಿಂದ 99.18 ಕೋಟಿ ರೂ. ಮೌಲ್ಯದ ನಗದು ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದ ಕೇವಲ 10 ದಿನಗಳಲ್ಲಿ 36.8 ಕೋಟಿ ನಗದು, 15.46 ಕೋಟಿ ಮೌಲ್ಯದ ಉಚಿತ ವಸ್ತುಗಳು, 30 ಕೋಟಿ ಮೌಲ್ಯದ 5.2 ಲಕ್ಷ ಲೀಟರ್ ಮದ್ಯ, 15 ಕೋಟಿ ಮೌಲ್ಯದ ಚಿನ್ನ ಮತ್ತು 2.5 ಕೋಟಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬುಲೆಟಿನ್ ತಿಳಿಸಿದೆ. .

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಭಾನುವಾರ ಯಾದಗಿರಿ ಜಿಲ್ಲೆಯಲ್ಲಿ 34 ಲಕ್ಷ ನಗದು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕ್ಷೇತ್ರದಲ್ಲಿ 21 ಲಕ್ಷ ಮೌಲ್ಯದ 56 ಟಿವಿಗಳನ್ನು ಸ್ಟಾಟಿಕ್ ಸರ್ವೆಲೆನ್ಸ್ ತಂಡ ವಶಪಡಿಸಿಕೊಂಡಿದೆ. 1.62 ಕೋಟಿ ಮೌಲ್ಯದ 54,282 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದೆ.
ಚುನಾವಣಾ ಆಯೋಗವು ಪಾರದರ್ಶಕತೆಗೆ ಒತ್ತು ನೀಡುತ್ತಿದ್ದು, ಸೂಕ್ತ ದಾಖಲೆಗಳಿಲ್ಲದ ನಗದು ಮತ್ತು ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಮತದಾರರಿಗೆ ಹಂಚಲು ರವಾನಿಸುತ್ತಿರುವ ವಸ್ತುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement