ಕಾಂಗ್ರೆಸ್ 3ನೇ ಪಟ್ಟಿ ಗೊಂದಲ : ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ, ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ 3ನೇ ಲಿಸ್ಟ್ ಗೊಂದಲದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ತೆರಳಿದ್ದಾರೆ. ಮೂರನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಇಬ್ಬರೂ ನಾಯಕರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಈವರೆಗೆ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, 166 ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಬೇಕಿದೆ.ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಸಾಕಷ್ಟು ಪೈಪೋಟಿ ಏರ್ಪಟ್ಟಿದ್ದು ಈ ಹಿನ್ನೆಲೆಯಲ್ಲಿ ಮೂರನೇ ಪಟ್ಟಿ ಬಿಡುಗಡೆ ವಿಳಂಬ ಆಗುತ್ತಿದೆ‌. ಮೂರನೇ ಪಟ್ಟಿ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ದಿಢೀರ್‌ ದೆಹಲಿಗೆ ತೆರಳಲಿದ್ದು ಪಕ್ಷದ ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣೊಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ಆದರೆ ಅವರು ಕೋಲಾರದಿಂದಲೂ ಟಿಕೆಟ್‌ ಕೇಳುತ್ತಿದ್ದಾರೆ. ಅದೂ ಸಹ ಇನ್ನೂ ನಿರ್ಧಾರವಾಗಿಲ್ಲ. ಹಾಗಾಗಿ, ಮೂರನೇ ಪಟ್ಟಿಯಲ್ಲಿ ಇದಕ್ಕೆ ಉತ್ತರ ಸಿಗಲಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement