ಇಂದಿನಿಂದ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ; ಇಂದಿನಿಂದ 2 ದಿನಗಳ ಕಾಲ ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.
ಮುನ್ಸೂಚನೆ ಪ್ರಕಾರ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿ ಕೆಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ. ಶುಕ್ರವಾರದಿಂದ ರಾಜ್ಯದಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ಪ್ರಕಾರ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಈ ವಾರ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾಜ್ಯದ ವಿವಿಧ ಕಡೆ ಶುಕ್ರವಾರ ಸುರಿದ ಗುಡುಗು ಸಹಿತ ಮಳೆ ಅವಾಂತರದಿಂದ ನಾಲ್ವರು ಮೃತಪಟ್ಟಿದ್ದಾರೆ. 13 ಜಾನುವಾರುಗಳು ಸಾವಿಗೀಡಾಗಿವೆ.
ಸಿಡಿಲು ಬಡಿದು ಕೊಪ್ಪಳದಲ್ಲಿ ಎರಡು ಜಾನುವಾರುಗಳು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ 5 ಜಾನುವಾರುಗಳು, ಬಸವಕಲ್ಯಾಣದಲ್ಲಿ 5 ಜಾನುವಾರುಗಳು ಮೃತಪಟ್ಟಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಉಜಿರೆ, ಧರ್ಮಸ್ಥಳ, ಮುಂಡಾಜೆಯಲ್ಲಿ ಆಲಿಕಲ್ಲು ಬಿದ್ದಿದ್ದು, ಬಳಿಕ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement