ಸಂಸದರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕೇರಳದ ವಯನಾಡಿಗೆ ರಾಹುಲ್‌ ಗಾಂಧಿ ನಾಳೆ ಭೇಟಿ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ಏಪ್ರಿಲ್ 11 ರಂದು ತಮ್ಮ ಹಿಂದಿನ ಕ್ಷೇತ್ರ ಕೇರಳದ ವಯನಾಡಿಗೆ ಭೇಟಿ ನೀಡುವ ನಿರೀಕ್ಷೆಯಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದ ನಂತರ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಅನರ್ಹಗೊಂಡಿತ್ತು. ಸೂರತ್ ನ್ಯಾಯಾಲಯವು 2019 ರಲ್ಲಿ ಕೋಲಾರದಲ್ಲಿ ಮಾಡಿದ ‘ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಏಕೆ’ ಎಂದು ಹೇಳಿಕೆಯ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದರು. ನಂತರ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲಾಯಿತು.
ಅವರು ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಲಾಗಿದೆ.
ವರದಿಗಳ ಪ್ರಕಾರ, ರಾಹುಲ್ ಗಾಂಧಿ ಅವರು ವಯನಾಡ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿ ಮತ್ತು ರೋಡ್‌ಶೋ ನಡೆಸಲಿದ್ದಾರೆ, ಇದರಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆಯಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್, ಎಐಸಿಸಿ ಸದಸ್ಯರು ಮತ್ತು ಕೆಪಿಸಿಸಿ ಮುಖಂಡರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಸ್ವಾಗತಕ್ಕೆ ಸಿದ್ಧತೆ
ರಾಹುಲ್ ಗಾಂಧಿ ಬರೆದ ಪತ್ರವನ್ನು ಈಗಾಗಲೇ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಂಚಲು ಆರಂಭಿಸಿದೆ. ಮೂಲಗಳ ಪ್ರಕಾರ, ಪತ್ರದಲ್ಲಿ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ ಮತ್ತು ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧದ ಹೋರಾಟವನ್ನು ಮುಂದುವರೆಸುವುದಾಗಿ ಉಲ್ಲೇಖಿಸಿದ್ದಾರೆ. ಸವಾಲುಗಳನ್ನು ಜಯಿಸಲು ಮತದಾರರು ಮತ್ತು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇರಬೇಕೆಂದು ಅವರು ನೆನಪಿಸಿದ್ದಾರೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement