ಏಪ್ರಿಲ್‌ 18ರಿಂದ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ ಡಿಎಂಸಿ) ಏಪ್ರಿಲ್‌ 18ರಿಂದ 26ರ ವರೆಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.
ಕೆಎಸ್ಎನ್ ಡಿಎಂಸಿ ಪ್ರಕಟಣೆಯ ಪ್ರಕಾರ, ಏಪ್ರಿಲ್‌ 18ರಿಂದ 26ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ತಾಲೂಕು, ತರೀಕೆರೆ, ನರಸಿಂಹರಾಜಪುರ, ಮೂಡಿಗೆರೆ ಹಾಗೂ ಹಾಸನ ಜಿಲ್ಲೆಯ ಹಾಸನ ತಾಲೂಕು, ಆಲೂರು, ಬೇಲೂರು- ಹಳೇಬೀಡು, ಹೊಳೆ ನರಸೀಪುರ, ಅರಕಲಗೂಡು ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಹಾಸನ ಜಿಲ್ಲೆಗೆ ಸೇರಿದ, ಮೈಸೂರು ಗಡಿರೇಖೆಯ ಬಳಿಯಲ್ಲಿರುವ ಜಿಲ್ಲೆಗಳಲ್ಲಿ ತುಸು ಕಡಿಮೆ ಮಳೆಯಾಗಬಹುದು. ಆದರೆ, ಅಲ್ಲಿಯೂ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಮಂಡ್ಯ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮಂಡ್ಯ ತಾಲೂಕು, ಕೃಷ್ಣರಾಜಪೇಟೆ, ಪಾಂಡವಪುರ, ಶ್ರೀರಂಗಪಟ್ಟಣದಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಉಲ್ಲೇಖಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರ ಪೇಟೆ, ಕುಶಾಲನಗರ, ವಿರಾಜಪೇಟೆ, ಪೊನ್ನಂಪೇಟೆ ಮೊದಲಾದಡೆ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ಮಳೆಯ ಮಾರುತಗಳು ಮೈಸೂರು ಹಾಗೂ ಚಾಮರಾಜ ನಗರದ ಮೇಲೂ ಪ್ರಭಾವ ಬೀರಲಿವೆ. ಮೈಸೂರು ಜಿಲ್ಲೆಯಲ್ಲಿ ಮೈಸೂರು ತಾಲೂಕು, ಹೆಗ್ಗಡದೇವನ ಕೋಟೆ, ನಂಜನಗೂಡು, ಸರಗೂರು, ಹನೂರು, ಕೃಷ್ಣರಾಜ ನಗರ, ಪಿರಿಯಾಪಟ್ಟಣ ಮೊದಲಾದೆಡೆ ಮಳೆಯಾಗಲಿದೆ. ಚಾಮರಾಜ ನಗರ ಜಿಲ್ಲೆಯ ಹನೂರು, ಯಳಂದೂರು, ಕೊಳ್ಳೇಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೋರಾಗಿ ಮಳೆಯಾಗಲಿದೆ, ಹಾಗೂ ಗುಂಡ್ಲುಪೇಟೆ, ಹಾಗೂ ಚಾಮರಾಜ ನಗರ ಪ್ರಾಂತ್ಯಗಳಲ್ಲಿ ಸಾಧಾರಣ ಮಳೆಯಾಗುತ್ತದೆ ಎಂದು ತಿಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಮುಂಡಗೋಡು, ಸಿದ್ದಾಪುರ; ಚಿತ್ರದುರ್ಗ ಜಿಲ್ಲೆಯ ಪಶ್ಚಿಮ ಭಾಗದ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ; ಕೊಪ್ಪಳದ ಪಶ್ಚಿಮ ಭಾಗದಲ್ಲಿರುವ ಕುಕನೂರು, ಕೊಪ್ಪಳ ತಾಲೂಕು, ಪೂರ್ವಭಾಗ, ಶಿವಮೊಗ್ಗದ ಪಶ್ಚಿಮ ಭಾಗ, ಶಿವಮೊಗ್ಗದ ಶಿವಮೊಗ್ಗ ನಗರ, ಭದ್ರಾವತಿ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಹೊಸನಗರ; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ; ಬೆಳ್ತಂಗಡಿ ಹಾಗೂ ಆಸುಪಾಸಿನ ಪ್ರಾಂತ್ಯಗಳಲ್ಲಿ ತುಂತುರು ಮಳೆಯಾಗುತ್ತದೆ ಎಂದು ಹೇಳಲಾಗಿದೆ.

ದಾವಣಗೆರೆಯ ದಾವಣಗೆರೆ ತಾಲೂಕು ಹರಿಹರ, ನ್ಯಾಮತಿ, ಹೊನ್ನಾಳಿ, ಚನ್ನಗಿರಿಯಲ್ಲಿ ಉತ್ತಮ ಮಳೆಯಾಗಲಿದೆ. ಹಾವೇರಿ ಜಿಲ್ಲೆಯ ಹಾವೇರಿ ತಾಲೂಕು, ಬ್ಯಾಡಗಿ, ಹಾನಗಲ್, ರಾಣೆಬೆನ್ನೂರು, ಹಿರೇಕೆರೂರು, ರಟ್ಟೇಹಳ್ಳಿ, ಸವಣೂರು, ಶಿಗ್ಗಾಂವಿಯಲ್ಲಿ ಉತ್ತಮ ಮಳೆಯಾಗಲಿದೆ.
ಬೆಳಗಾವಿ, ಬೈಲಹೊಂಗಲ, ಕಿತ್ತೂರು; ಧಾರವಾಡ ಜಿಲ್ಲೆಯಲ್ಲಿ, ಧಾರವಾಡ ತಾಲೂಕು, ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ, ಲಕ್ಷ್ಮೇಶ್ವರ, ಹುಬ್ಬಳಿ ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಇದಲ್ಲದೆ, ಮಂಡ್ಯದ ಪೂರ್ವ ಭಾಗದಲ್ಲಿ, ತುಮಕೂರು ಪಶ್ಚಿಮ ಭಾಗ, ಶಿವಮೊಗ್ಗದ ಪೂರ್ವ ಭಾಗ, ರಾಮನಗರದ ಪಶ್ಚಿಮ ಭಾಗದಲ್ಲಿ, ವಿಜಯನಗರ ಜಿಲ್ಲೆಯ ಪಶ್ಚಿಮ ಭಾಗ, ಚಿತ್ರದುರ್ಗದ ಪಶ್ಚಿಮ ಭಾಗದಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement