ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

posted in: ರಾಜ್ಯ | 0

ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸದಂತೆ ಮನವಿ ಮಾಡಿದ್ದಾರೆ.
ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಟಿಕೆಟ್‌ ಘೋಷಣೆಗೂ ಮುನ್ನವೇ ಅವರು ಚುನಾವಣಾ ರಾಜಕೀಯಕ್ಕೆ ಸ್ವತಃ ನಿವೃತ್ತಿ ಘೋಷಣೆ ಮಾಡಿರುವ ಅವರು ಕುಂದಾಪುರ ಹಾಲಾಡಿ  ಶ್ರೀನಿವಾಸ ಶೆಟ್ಟಿ ಹಾಗೂ ಎ.ರವೀಂದ್ರನಾಥ ಅವರ ನಂತರ ಮೂರನೇ ವ್ಯಕ್ತಿಯಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement