ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಮತ್ತೆ ಜೆಡಿಎಸ್ ಕದ ತಟ್ಟಿದ ವೈಎಸ್‌ವಿ ದತ್ತ

posted in: ರಾಜ್ಯ | 0

ಬೆಂಗಳೂರು : ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ವೈ ಎಸ್ ವಿ ದತ್ತ ಅವರು ಮತ್ತೆ ಜೆಡಿಎಸ್ ಕದ ತಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು, ಬುಧವಾರ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿವಾಸಕ್ಕೆ ವೈಎಸ್ ವಿ ದತ್ತ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದ್ದು, ಟಿಕೆಟ್ ನೀಡುವಂ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ.
ದೇವೇಗೌಡರ ಮೂಲಕ ಮತ್ತೆ ಜೆಡಿಎಸ್ ಸೇರಲು ದತ್ತ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ದೇವೇ ಗೌಡರು ಈ ಬಗ್ಗೆ ಕುಮಾರಸ್ವಾಮಿ ಅವರ ಬಗ್ಗೆ ಚರ್ಚಿಸಿದ ನಂತರ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೆ ದತ್ತ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು ಹಾಗೂ ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್‌ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement