ನಡ್ಡಾ ಭೇಟಿಯಿಂದ ಸಮಾಧಾನವಾಗಿದೆ, ಎರಡು ದಿನದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ: ಜಗದೀಶ ಶೆಟ್ಟರ್

ನವದೆಹಲಿ : ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬುಧವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು.
ನಡ್ಡಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಶೆಟ್ಟರ್ ಅವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಧನಾತ್ಮಕ ಚರ್ಚೆ ನಡೆದಿದ್ದು, ಅವರು ನನ್ನ ಮನವಿಯನ್ನು ಆಲಿಸಿದ್ದಾರೆ ಎಂದು ನಂತರ ಶೆಟ್ಟರ ಹೇಳಿದ್ದಾರೆ.
ನನ್ನ ಮನಸ್ಸಿನಲ್ಲಿದ್ದ ಎಲ್ಲಾ ಅಭಿಪ್ರಾಯವನ್ನು ಜೆಪಿ ನಡ್ಡಾ ಅವರ ಬಳಿ ಹೇಳಿದ್ದೇನೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದೇನೆ. ಜೆ.ಪಿ ನಡ್ಡಾ ನನ್ನ ಮನವಿಯನ್ನು ಕೇಳಿಸಿಕೊಂಡಿದ್ದಾರೆ. ಎರಡು ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತಾರೋ/ಇಲ್ಲವೋ ಗೊತ್ತಿಲ್ಲ, ಅದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೆ ಇಂದಿನ ಭೇಟಿಯಿಂದ ನನಗೆ ಸಮಾಧಾನವಾಗಿದೆ ಎಂದರು. .

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನ ಹಾಲಿ ಶಾಸಕ ಶೆಟ್ಟರ್ ಅವರು, ಚುನಾವಣೆಗೆ ಸ್ಪರ್ಧಿಸದಂತೆ ಬಿಜೆಪಿ ಕೇಂದ್ರ ನಾಯಕತ್ವ ನಮ್ಮನ್ನು ಕೇಳಿದೆ ಎಂದು ಶೆಟ್ಟರ ಅವರು ಮಂಗಳವಾರ ಹೇಳಿದರು. ಆದರೂ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಾಗಿ ನಾಯಕತ್ವಕ್ಕೆ ತಿಳಿಸಿದ್ದು, ಅದಕ್ಕಾಗಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದರು.
ಬಿಜೆಪಿ ಹೈಕಮಾಂಡ್‌ ನಿರ್ಧಾರ ತಮಗೆ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು ಮತ್ತು ಪಕ್ಷದ ವರಿಷ್ಠರು ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.
ಮಂಗಳವಾರ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳು ಸೇರಿದ್ದವು.
ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಏಪ್ರಿಲ್ 13ರಿಂದ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಡೆಯಲಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement