ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಎಸ್. ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಪಕ್ಷವು ಗೌರವಿಸುವ ರೀತಿ ಇದಲ್ಲ ಎಂದು ಹೇಳಿದ್ದಾರೆ.
ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲದಂತಾಗಿದೆ. ನಾನು ಲಾಬಿ ಮಾಡುವವನಲ್ಲ, ಈಗ ನನಗೆ ಅದೇ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೂ ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಸತತ ಆರು ಸಲ ಸುಳ್ಯ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಎಸ್. ಅಂಗಾರ ಅವರಿಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಇದರಿಂದ ಅಸಮಾಧಾನಗೊಂಡ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. 7 ಬಾರಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂಗಾರ, ಮೊದಲ ಬಾರಿಗೆ ಸೋಲು ಅನುಭವಿಸಿದ್ದರು. ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಸಚಿವರಾಗಿದ್ದರು. ಇವರ ಬದಲು ಬಿಜೆಪಿ ಈ ಬಾರಿ ಮಹಿಳಾ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಿದೆ. ಪ್ರಸ್ತುತ ಇವರು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆಯಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ