ಬಿಜೆಪಿ ಟಿಕೆಟ್ ಸಿಗದಕ್ಕೆ ಅಸಮಾಧಾನ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆರ್‌. ಶಂಕರ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಶಂಕರ್ ಬದಲಿಗೆ ಹಾಲಿ ಶಾಸಕ ಅರುಣಕುಮಾರ್‌ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ಇಂದು ತಮ್ಮ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ಆರ್ ಶಂಕರ್ ಅವರು ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ಟಿಕೆಟ್ ಘೋಷಣೆಗೂ ಮುನ್ನವೇ, ಅಂದರೆ ಕೆಲ ತಿಂಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರು ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸಹ ಟಿಕೆಟ್‌ ನೀಡಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿ :-   ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement