ತುಮಕೂರು : ಬಿಜೆಪಿಗೆ ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ

posted in: ರಾಜ್ಯ | 0

ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದೇ ಇದ್ದುದಕ್ಕೆ ಅಸಮಾಧಾನಗೊಂಡ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರಿಗೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ತುಮಕೂರು ನಗರ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಖಚಿತ. ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರನಾಗಿ ಸ್ಪರ್ಧಿಸಬೇಕಾ..? ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕೇ ಎಂಬುದರ ಕುರಿತು ಒಂದೆರಡು ದಿನಗಳಲ್ಲಿ ತೀರ್ಮಾನಿಸುತ್ತೇನೆ ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನನ್ನ ಬೆಂಬಲಿಗರು ನೀವು ರಾಜಕಾರಣದಲ್ಲಿ ಇರಬೇಕು ಎಂದು ಹೇಳಿದ್ದಾರೆ. ನಾನು ಎಂದಿಗೂ ಜಾತಿ ರಾಜಕಾರಣ ಮಾಡಿದವನಲ್ಲ. ಭ್ರಷ್ಟಾಚಾರ ಮಾಡಿಲ್ಲ, ಮುಸ್ಲಿಮ, ಕ್ರೈಸ್ತರ‌ ಮನೆಗೆ ಹೋದರೂ ನನಗೆ ಯಾವುದೇ ಭೇದಭಾವ ಇಲ್ಲ. ನಾನು ಒಂದು ತರಹದಲ್ಲಿ ಅಲೆಮಾರಿ ಇದ್ದಂತೆ, ತುಮಕೂರು ಜಿಲ್ಲೆಯ ಜನರ ಕಷ್ಟ ಸುಖ ಎಲ್ಲವೂ ಗೊತ್ತು. ರಾಜಕಾರಣದಲ್ಲಿ ಇವತ್ತು ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆರ್‌ಎಸ್‌ಎಸ್‌ ಹಿನ್ನೆಲೆ ಇರುವ ಸೊಗಡು ಶಿವಣ್ಣ ಅವರು ತುಮಕೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಸಂಸದ ಜಿ.ಎಸ್. ಬಸವರಾಜು ಅವರ ಪುತ್ರ ಹಾಲಿ ಶಾಸಕ ಜಿ.ಬಿ. ಜ್ಯೋತಿ ಗಣೇಶ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಈ ಸಲ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿ ಸೊಗಡು ಶಿವಣ್ಣ ಅವರಿಗೆ ನಿರಾಸೆಯಾಗಿದೆ. ಮತ್ತೊಮ್ಮೆ ಜ್ಯೋತಿ ಗಣೇಶ ಅವರಿಗೆ ತುಮಕೂರು ನಗರ ಟಿಕೆಟ್‌ ನೀಡಿದ್ದರಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ಜನತೆಗೆ ರಾಜ್ಯ ಸರ್ಕಾರದಿಂದ ಶಾಕ್ : ಜೂನ್‌1 ರಿಂದಲೇ ವಿದ್ಯುತ್ ದರ ಹೆಚ್ಚಳ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement