ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್ ಹಾರಾಟ ನಡೆಸುವ ಹೆಲಿಪ್ಯಾಡ್ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕ ಸೃಷ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋಗುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಅಲ್ಲಿಂದ ಕೊಲ್ಲೂರಿಗೆ ಹೋಗಲು ಅಲ್ಲಿಂದ ನಿರ್ಗಮಿಸಿದ ಬಳಿಕ ಹೆಲಿಪ್ಯಾಡ್ ಆವರಣದಲ್ಲಿ ಅನಿರೀಕ್ಷಿತವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಹೆಲಿಕಾಪ್ಟರ್ ಹಾರಾಟದ ಮಾಡುವ ಕುರಿತು ಆತಂಕ ಸೃಷ್ಟಿಯಾಗಿತ್ತು. ಆದರೆ ತಕ್ಷಣಕ್ಕೆ ಕಾರ್ಯಪ್ರವೃತರಾದ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಮುಖ್ಯಮಂತ್ರಿ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಹೆಲಿಕಾಪ್ಟರ್ ಫ್ಯಾನ್‌ನ ಬಲವಾದ ಗಾಳಿಯಿಂದ ಬೆಂಕಿ ಹರಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ