ಕರ್ನಾಟಕ ಚುನಾವಣೆ 2023 : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು, ಗುರುವಾರ (ಎಪ್ರಿಲ್‌ 13)ದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎಪ್ರಿಲ್‌ 20 ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 5.24 ಕೋಟಿ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ.
ಎ.13 -ಚುನಾವಣಾ ಅಧಿಸೂಚನೆ ಮತ್ತು ನಾಮಪತ್ರ ಸಲ್ಲಿಕೆ ಆರಂಭ
ಎ.20 -ನಾಮಪತ್ರ ಸಲ್ಲಿಕೆಗೆ ಕೊನೆ ದಿನ.
ಎ.21 -ನಾಮಪತ್ರಗಳ ಕ್ರಮಬದ್ಧತೆ ಪರಿಶೀಲನೆ.
ಎ.24 -ನಾಮಪತ್ರ ಹಿಂಪಡೆಯಲು ಕೊನೆ ದಿನ
ಮೇ 10 -ಮತದಾನ
ಮೇ 13 -ಮತ ಎಣಿಕೆ ಮತ್ತು ಫಲಿತಾಂಶ
ಆಡಳಿತಾರೂಢ ಬಿಜೆಪಿ 212 ಕ್ಷೇತ್ರಗಳಿಗೆ ಕಾಂಗ್ರೆಸ್‌ 166 ಕ್ಷೇತ್ರಗಳಿಗೆ, ಹಾಗೂ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ್ದು, ‘ಬಿ’ ಫಾರಂ ವಿತರಣೆ ಆರಂಭಿಸಿವೆ. ಅಭ್ಯರ್ಥಿಗಳ ಘೋಷಣೆ ಬಾಕಿ ಇರುವ ಕ್ಷೇತ್ರಗಳಲ್ಲಿ ಟಿಕೆಟ್‌ ಹಂಚಿಕೆ ಕುರಿತು ಕುತೂಹಲವೂ ಹೆಚ್ಚಿದೆ. ಎಲ್ಲ ಪಕ್ಷಗಳೂ ಗೆಲ್ಲುವ ಸಾಮರ್ಥ್ಯದ ಟಿಕೆಟ್‌ ಆಕಾಂಕ್ಷಿಗಳ ಹುಡುಕಾಟ ನಡೆಸಿದ್ದಾರೆ.
ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 80 ವರ್ಷಕ್ಕೂ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನ ಮತದಾರರಿಗೆ ಹಾಗೂ ತೀವ್ರ ರೋಗ ಬಾಧೆ ಇರುವ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡಲು ಹೆಸರು ನೋಂದಾಯಿಸಿಕೊಳ್ಳಲು ಮೊದಲ ಬಾರಿಗೆ ಆಯೋಗ ಅವಕಾಶ ಕಲ್ಪಿಸಿದೆ. ಹೊಸದಾಗಿ ಮತದಾರರ ಪಟ್ಟಿ ಸೇರಿರುವ 18 ರಿಂದ 19 ವರ್ಷ ವಯಸ್ಸಿನ ಒಟ್ಟು 9.58 ಲಕ್ಷ ಮತದಾರರು ಮೊದಲ ಬಾರಿಗೆ ಹಕ್ಕು ಚಲಾಯಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement