ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಪೋಸ್ಟರ್ ಹರಿದು ಹಾಕಿದ ನಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮಹಿಳೆಯರು | ವೀಕ್ಷಿಸಿ

ವಿಜಯವಾಡ: ಕೇಳಿರದ ಘಟನೆಯೊಂದರಲ್ಲಿ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಪೋಸ್ಟರ್ ಅನ್ನು ಹರಿದು ಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಹಿಳೆಯರ ಗುಂಪೊಂದು ನಾಯಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದೆ….!
ವಿಜಯವಾಡದಲ್ಲಿ ಈ ಘಟನೆ ನಡೆದಿದ್ದು, ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಾರ್ಯಕರ್ತೆ ಎನ್ನಲಾದ ದಾಸರಿ ಉದಯಶ್ರೀ ವ್ಯಂಗ್ಯವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿಗೆ ಅವಮಾನ ಮಾಡಿರುವ ನಾಯಿ ಹಾಗೂ ಅದರ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇತರ ಕೆಲ ಮಹಿಳೆಯರೊಂದಿಗೆ ಸೇರಿ ದೂರು ದಾಖಲಿಸಿದ್ದಾರೆ.
ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ವಿರುದ್ಧ ವ್ಯಂಗ್ಯವಾಡುವ ವೀಡಿಯೊದಲ್ಲಿ ಮಹಿಳೆ ತನ್ನ ದೂರನ್ನು ಮುಂದಿಟ್ಟಿದ್ದಾರೆ.
ಇದಕ್ಕೂ ಮುನ್ನ ಜಗನ್ಮೋಹನ್ ರೆಡ್ಡಿ ಅವರ ಫೋಟೋ ಇರುವ ಸ್ಟಿಕ್ಕರ್ ಅನ್ನು ನಾಯಿಯೊಂದು ಕಿತ್ತು ಹಾಕುತ್ತಿರುವ ವೀಡಿಯೊ ವ್ಯಾಪಕವಾಗಿ ಹರಿದಾಡಿತ್ತು.

ಸ್ಟಿಕ್ಕರ್‌ “ಜಗನಣ್ಣ ಮಾ ಭವಿಷ್ಯತ್ತು” (ಜಗನ್ ಅಣ್ಣ ನಮ್ಮ ಭವಿಷ್ಯ) ಎಂಬ ಘೋಷಣೆಯನ್ನು ಹೊಂದಿದ್ದು, ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ನಡೆಸುತ್ತಿರುವ ರಾಜ್ಯಾದ್ಯಂತ ನಡೆಯುತ್ತಿರುವ ಸಮೀಕ್ಷೆಯ ಭಾಗವಾಗಿ ಮನೆಯೊಂದಕ್ಕೆ ಅಂಟಿಸಲಾಗಿದೆ.
ಸ್ಥಳೀಯ ಟೆಲಿವಿಷನ್ ಚಾನೆಲ್‌ಗಳೊಂದಿಗೆ ಮಾತನಾಡಿದ ಉದಯಶ್ರೀ ಎಂಬ ಮಹಿಳೆ, 151 ವಿಧಾನಸಭಾ ಸ್ಥಾನಗಳನ್ನು ಗೆದ್ದ ಜಗನ್ಮೋಹನ್ ರೆಡ್ಡಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅಂತಹ ನಾಯಕನನ್ನು ಅವಮಾನಿಸುವ ನಾಯಿ ರಾಜ್ಯದ ಆರು ಕೋಟಿ ಜನರಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.ನಮ್ಮ ಪ್ರೀತಿಯ ಮುಖ್ಯಮಂತ್ರಿಯನ್ನು ಅವಮಾನಿಸಿದ ನಾಯಿ ಮತ್ತು ನಾಯಿಯ ಹಿಂದೆ ಇರುವವರನ್ನು ಬಂಧಿಸುವಂತೆ ನಾವು ಪೊಲೀಸರಿಗೆ ವಿನಂತಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ಜಗನ್ಮೋಹನ್ ರೆಡ್ಡಿ ಅವರ ಫೋಟೋ ಇರುವ ಸ್ಟಿಕ್ಕರ್ ಅನ್ನು ನಾಯಿ ಹರಿದು ಹಾಕಿರುವ ವಿಡಿಯೋ ವೈರಲ್ ಆಗಿದೆ. ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ರಾಜ್ಯಾದ್ಯಂತ ನಡೆಯುತ್ತಿರುವ ಸಮೀಕ್ಷೆಯ ಭಾಗವಾಗಿ ಜಗನಣ್ಣ ಮಾ ಭವಿಷ್ಯತು (ಜಗನ್ ಅಣ್ಣ ನಮ್ಮ ಭವಿಷ್ಯ) ಎಂಬ ಸ್ಟಿಕರ್ ಅನ್ನು ಮನೆಯ ಗೋಡೆಯ ಮೇಲೆ ಅಂಟಿಸಲಾಗಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement