ಕಾಡಾನೆ ದಾಳಿಯಿಂದ ಗಂಭೀರ ಗಾಯ : ಜೀರೋ ಟ್ರಾಫಿಕ್ ಮೂಲಕ ಆನೆ ವೈದ್ಯ ಡಾ.ವಿನಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

posted in: ರಾಜ್ಯ | 0

ಶಿವಮೊಗ್ಗ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಡಾ.ವಿನಯ್​ ಅವರನ್ನು ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.
ಮೂರು ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕಾಡಾನೆ ಸೆರೆ ಆಪರೇಷನ್ ವೇಳೆ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಪಶು ವೈದ್ಯ ಡಾ. ವಿನಯ ಅವರ ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ವೈದ್ಯರ ಬೆನ್ನು ಮೂಳೆಗೆ ಬಲವಾಗಿ ಪೆಟ್ಟು ಬಿದ್ದಿತ್ತು. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಡಾ. ವಿನಯ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಡಾ.ವಿನಯ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅದರಂತೆ ರಾತ್ರಿಯೇ ಮಣಿಪಾಲ ವೈದ್ಯರು ಮತ್ತು ವೈದ್ಯಕೀಯ ತಂಡದ ಸಹಾಯದೊಂದಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಡಾ.ವಿನಯ ಅವರು, ಕಳೆದ 10 ವರ್ಷಗಳಿಂದ ಸಕ್ರೆಬೈಲಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಹಾಸನ ಮುಂತಾದ ಜಿಲ್ಲೆಯಲ್ಲಿ ಡಾ. ವಿನಯ ನೇತೃತ್ವದಲ್ಲಿ ಕಾಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಗಳು ನಡೆದಿವೆ. ಹತ್ತಾರು ಕಾಡಾನೆ ಸೆರೆ ಹಿಡಿಯುವ ಆಪರೇಶನ್‌ನಲ್ಲಿ ಡಾ. ವಿನಯ ಮೂಂಚೂಣಿಯಲ್ಲಿರುತ್ತಿದ್ದರು. ಆದರೆ ಮೊನ್ನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕಾಡಾನೆ ಸೆರೆ ಆಪರೇಷನ್ ವೇಳೆ ಕಾಡಾನೆ ಡಾ. ವಿನಯ್ ಅವರ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು.

ಇಂದಿನ ಪ್ರಮುಖ ಸುದ್ದಿ :-   ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement